ಗಿಡಗಳನ್ನು ನೆಟ್ಟು ಬೆಳೆಸುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ; ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಗ್ರಾಮ ಪಂಚಾಯತ್ ಕುಕ್ಕೇಡಿ, ಅರಣ್ಯ ಇಲಾಖೆ ವೇಣೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಕ್ಕೆಡಿ ನಿಟ್ಟೆಡೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಇವರು ಸಾಂಕೇತಿಕವಾಗಿ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಒಂದು ಕಾಲದಲ್ಲಿ ಹೇರಳವಾದ ನೀರಿನ ಆಶ್ರಯ ಇದ್ದ ನಮ್ಮ ಈ ಭೂಮಿಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು ಇದೀಗ ಒಂದು ಸಾವಿರ ಅಡಿಗಳಷ್ಟು ಆಳದಲ್ಲಿಯೂ ನೀರು ಸಿಗದ ಪರಿಸ್ಥಿತಿ ಬಂದಿದೆ, ಮುಂದಿನ ಪೀಳಿಗೆ ಹಿತದೃಷ್ಟಿಯಿಂದ ಆರೋಗ್ಯಕರ ಗಾಳಿ ಆರೋಗ್ಯಕರ ಪರಿಸರ ಆರೋಗ್ಯಕರ ಆಹಾರ ಇವುಗಳನ್ನು ಗಮನದಲ್ಲಿ ಇರಿಸಿಕೊಂಡು ಪ್ರತಿಯೊಂದು ಮನೆಯಲ್ಲಿಯೂ ಗಿಡಗಳನ್ನು ನೆಟ್ಟು ಬೆಳೆಸುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭರತ್ ಯು.ಜಿ. ವಲಯ ಅರಣ್ಯಾಧಿಕಾರಿಗಳು ವೇಣೂರು ವಲಯ, ಡಿ ಸುಧಾಕರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶೇಖರ್ ಕುಕ್ಕೇಡಿ ಉಪಾಧ್ಯಕ್ಷರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು, ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಅಧ್ಯಕ್ಷತೆಯನ್ನು ವಹಿಸಿದ್ದರು.
ಕುಮಾರಿ ಪೂಜ್ಯ ಪ್ರಾರ್ಥಿಸಿ, ಕಿರಿಯ ತರಬೇತಿ ಅಧಿಕಾರಿ ಪ್ರಸನ್ನ ವೈಟಿ ಸ್ವಾಗತಿಸಿದ ಕಾರ್ಯಕ್ರಮವನ್ನು ಕಿರಿಯ ತರಬೇತಿ ಅಧಿಕಾರಿ ಸತೀಶ್ ನಿರೂಪಿಸಿದರು, ಕಿರಿಯ ತರಬೇತಿ ಅಧಿಕಾರಿ ವಿನಯ ಚಂದ್ರ ರಾಜ್ ವಂದಿಸಿದರು.



