ವಿರೋಧ ಪಕ್ಷದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ

 

ದೆಹಲಿ:   ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಸೇರಿದಂತೆ ಮೂರು ಜನರ ಹೆಸರು  ಸಂಭಾವ್ಯರ ಪಟ್ಟಿಯಲ್ಲಿ ಕೇಳಿ ಬಂದಿತ್ತು.

ಇದೀಗ  ಅಂತಿಮವಾಗಿ ವಿರೋಧ ಪಕ್ಷದ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಏತನ್ಮಧ್ಯೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ ಸಂಸದೀಯ ಮಂಡಳಿ ಸಭೆಯನ್ನು ನಡೆಸಲಿದ್ದು ಅಲ್ಲಿ ಅದು ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಬಿಜೆಪಿ ಆಡಳಿತದಲ್ಲಿ ಸಚಿವರಾಗಿದ್ದ ಮಾಜಿ ಅಧಿಕಾರಿ ಯಶವಂತ್ ಸಿನ್ಹಾ ಅವರು ಕಳೆದ ವರ್ಷ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಜುಲೈ 18 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಅವರ ಸಂಭಾವ್ಯ ಉಮೇದುವಾರಿಕೆಯ ಬಗ್ಗೆ ಇಂದು ಬೆಳಿಗ್ಗೆ ಅವರು ತೃಣಮೂಲದಿಂದ ದೂರ ಸರಿಯುತ್ತಿರೋದಾಗಿ ತಮ್ಮ ಖಾತೆಯಲ್ಲಿ  ಟ್ವಿಟ್ ಮಾಡುವ ಮೂಲಕ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours