ಕಾರಜೋಳಗೆ ಯಡಿಯೂರಪ್ಪ ಬಲ, ಲಿಂಗಾಯತ ಮತ ಸೆಳೆಯಲು ಕೋಟೆ ನಾಡಿನಲ್ಲಿ ಪ್ರಚಾರ

 

 

 

 

ಚಳ್ಳಕೆರೆ: (challakere) ಚಿತ್ರದುರ್ಗ ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ ೨೮ ಕ್ಷೇತ್ರಗಳಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು ಜಯಸಾಧಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರದ  ಪ್ರಧಾನಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರಮೋದಿಯವರು ಅಧಿಕಾರ ಸ್ವೀಕರಿಸುವ ಕ್ಷಣಗಳಿಗಾಗಿ ಕಾಯುತ್ತಿದ್ಧಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅವರು, ಶನಿವಾರ ನಗರದ ರಾಘವೇಂದ್ರ ಕಲ್ಯಾಣಮಂಟಪದಲ್ಲಿ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಸೇರ್ಪಡೆ ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯವೂ ಸೇರಿದಂತೆ ರಾಷ್ಟ್ಟ್ರ ದಲ್ಲಿ ಕಾಂಗ್ರೆಸ್ ದಿವಾಳಿ ಹಂಚಿನಲ್ಲಿದೆ, ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಉತ್ತರವಿಲ್ಲ. ಅವರೇ ರಚಿಸಿಕೊಂಡ ಇಂಡಿಯಾ ಒಕ್ಕೂಟ ಇಂದು ಚಿದ್ರವಾಗಿದೆ. ಮೋದಿಯವರನ್ನು ಸೋಲಿಸಲು ಒಂದಾದ ಜನ ಮೋದಿಯವರ ಜನಪ್ರಿಯತೆ ಕಂಡು ಕಾಂಗ್ರೆಸ್ ಮೈತ್ರಿಕೂಟಕ್ಕೆ ಗುಡ್‌ಬೈ ಹೇಳಿ ಹೊರಬರುತ್ತಿದ್ಧಾರೆ. ಇದು ರಾಷ್ಟ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿಯಾಗಿ ಹ್ಯಾಟಿಕ್ ಸಾಧಿಸುವುದುಕ್ಕೆ ಪುರಾವೆಯಾಗಿದೆ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಇಡೀ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಾತಾವರಣ ದಿನದಿನಕ್ಕೂ ಹೆಚ್ಚುತ್ತಿದೆ. ಈ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸೇರ್ಪಡೆಯಿಂದ ಪಕ್ಷದ ಗೆಲುವು ಹತ್ತಿರವಾಗಿದೆ. ಬಿಜೆಪಿಯಲ್ಲಿ ಸಮರ್ಥನಾಯಕರು ಇದ್ದಾರೆ. ಅಭ್ಯರ್ಥಿ ಗೋವಿಂದಕಾರಜೋಳ ಜನಾನುರಾಗಿ ನಾಯಕರಾಗಿದ್ಧಾರೆ ಎಂದರು.

ಗಂಗಾವತಿ ಶಾಸಕ ಜನಾರ್ದನರೆಡ್ಡಿ ಮಾತನಾಡಿ  ಕಾಂಗ್ರೆಸ್ ಪಕ್ಷದಲ್ಲಿ ಗೆಲುವು ಸಾಧಿಸುವ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಈಗಾಗಲೇ ಬಿಜೆಪಿ ಜನಪ್ರಿಯತೆ ನೋಡಿ ಗಲಿಬಿಲಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವದಿಂದ ಜನರಿಗೆ ಭ್ರಮನಿರಸನವಾಗಿದೆ. ಗ್ಯಾರಂಟಿಗಳ ಅನುಷ್ಠಾನದಲ್ಲಿ ಸುಳ್ಳು ಪ್ರಚಾರ ಪಡೆಯುತ್ತಿದ್ಧಾರೆಂದರು.

 

 

ಶಾಸಕ ಬೈರತಿ ಬಸವರಾಜು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿ ವಿಶ್ವನಾಯಕರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ಪ್ರತಿಯೊಂದು ರಾಷ್ಟçದಲ್ಲೂ ಮೋದಿಯವರನ್ನು ಗೌರವಿಸುವವರ ಸಂಖ್ಯೆ ಹೆಚ್ಚಾಗಿದೆ. ನಾಡಿನ ಜನರ ಸಂಕಲ್ಪ ಮೋದಿಯವರನ್ನು ಗೆಲ್ಲಿಸುವುದಾಗಿದೆ ಎಂದರು.

ಬಿಜೆಪಿ ಸೇರ್ಪಡೆಯಾದ ಯುವ ಮುಖಂಡ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಈ ನಾಡಿನ ಧೀಮಂತ ನಾಯಕ, ರಾಜಕೀಯ ಭೀಷ್ಮ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿರುವುದು ಸಂತಸ ತಂದಿದೆ. ೨೦೦೮ರಲ್ಲಿ ನಮ್ಮ ತಂದೆ ತಿಪ್ಪೇಸ್ವಾಮಿ ಶಾಸಕರಾಗಿದ್ಧಾರೆ ಯಡಿಯೂರಪ್ಪನವರನ್ನು ಬೆಂಬಲಿಸಿದ್ದರು. ನಾನು ಸಹ ಈ ಕ್ಷೇತ್ರದ ಅಭ್ಯರ್ಥಿ ಗೋವಿಂದಕಾರಜೋಳ ಗೆಲುವಿಗೆ ಹೆಚ್ಚು ಶ್ರಮಿಸುತ್ತೇನೆಂದರು.

ಇದನ್ನೂ ಓದಿ: ಬಿ.ಎನ್.ಚಂದ್ರಪ್ಪ ಪರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಶಾಸಕ ಬಿ.ಜಿ.ಗೋವಿಂದಪ್ಪ

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿ.ಬಸವರಾಜಮಂಡಿಮಠ, ಜಿಲ್ಲಾಧ್ಯಕ್ಷ ಎ.ಮುರುಳಿ, ಲಿಂಗಮೂರ್ತಿ, ಬಾಳೆಮಂಡಿರಾಮದಾಸ್, ಅನಿಲ್‌ಕುಮಾರ್, ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours