ಯುವ ಸಂವಾದ ಕಾರ್ಯಕ್ರಮ: ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.7:
ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ “ಯುವ ಸಂವಾದ” ಕಾರ್ಯಕ್ರಮಗಳನ್ನು ನಡೆಸಲು ಆಸಕ್ತ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿರುತ್ತದೆ.
ಭಾರತ ಸರ್ಕಾರದ ಯುವಜನ ವ್ಯವಹಾರ  ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆಯು “ಯುವ ಸಂವಾದ” ಇಂಡಿಯಾ@2047 ಎನ್ನುವ ಹೊಸ ಕಾರ್ಯಕ್ರಮನ್ನು ಹೊರ ತಂದಿದ್ದು, ಸಮುದಾಯ ಅಭಿವೃದ್ಧಿ ಆಧಾರಿತ ಸಂಸ್ಥೆಗಳ ಸಹಯೋಗದಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ 2023ರ ಏಪ್ರಿಲ್ 01 ರಿಂದ ಮೇ 31ರವರೆಗೆ ಕಾರ್ಯಕ್ರಮ ಆಚರಿಸಲು ಉದ್ದೇಶಿಸಿದೆ.
ಪ್ರಧಾನ ಮಂತ್ರಿಗಳ ಮಾರ್ಗದರ್ಶನ ಮತ್ತು ಸ್ಫೂರ್ತಿಯಿಂದ ಭಾರತ 75ನೇ ವರ್ಷದ ಸ್ವಾತಂತ್ರ್ಯದ ಸ್ಮರಣಾರ್ಥವಾಗಿ ಆಜಾದೀ ಕಾ ಅಮೃತ ಮಹೋತ್ಸವ ಆಚರಿಸುತ್ತಿದೆ. ಭಾರತದ ಇತಿಹಾಸದಲ್ಲಿ ಖ್ಯಾತಿ ಪಡೆದ ಗಣ್ಯರ ಸಾಧನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ತಮ್ಮ ಭಾಷಣದಲ್ಲಿ “ಪಂಚ ಪ್ರಾಣ್” ಎನ್ನುವ ಮಂತ್ರವನ್ನು ಘೋಷಿಸಿದ್ದಾರೆ.
ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಸಹಯೋಗದಲ್ಲಿ ಆಚರಿಸಲು ಯೋಜನೆ ರೂಪಿಸಿದ್ದು, ಜಿಲ್ಲಾ ನೆಹರು ಯುವ ಕೇಂದ್ರಗಳ ಕೈಜೋಡಿಸಿ-ದೇಶದ ಭವಿಷ್ಯದ ಬಗ್ಗೆ ಸಕಾರಾತ್ಮಕವಾಗಿ ಚಿಂತಿಸಿ, ಪ್ರಧಾನ ಮಂತ್ರಿಗಳ ಆಶಯದಂತೆ “ಪಂಚ ಪ್ರಾಣ್” ಯೋಜನೆಯನ್ನು ವ್ಯವಸ್ಥಿತ ಗುರಿಯೊಂದಿಗೆ ಸಾಧಿಸಬೇಕಾಗಿದೆ.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ತುಂಬಾ ನುರಿತ, ಉತ್ತಮ ಜ್ಞಾನವುಳ್ಳ ಗಣ್ಯರನ್ನು ಸೇರಿಸಿಕೊಂಡು ಈ ಪಂಚ ಪ್ರಾಣ್ ಯೋಜನೆಯನ್ನು ಸುಮಾರು 500ಕ್ಕೂ ಹೆಚ್ಚು ಯುವಜನರೊಡನೆ ಪ್ರಶ್ನೋತ್ತರದ ಮೂಲಕ ಸಂವಾದ ನಡೆಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ. ಪ್ರತಿ ಜಿಲ್ಲೆಯಲ್ಲಿ ಸಮುದಾಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಮೂರು ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರತಿಯೊಂದು ಕಾರ್ಯಕ್ರಮಕ್ಕೂ ರೂ.20000/-ಸಾವಿರ ಅನುದಾನವನ್ನು ನಿಗದಿಪಡಿಸಲಾಗಿದೆ. ಈ ಅನುದಾನವನ್ನು ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಗೆ ಕೊಡಲಾಗುವುದು. ಆದುದರಿಂದ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ಯಾವುದೇ ರಾಜಕೀಯ ಪಕ್ಷವಲ್ಲದ ಪಕ್ಷಪಾತವಿಲ್ಲದ ಮತ್ತು ಜಾತಿ ಬೇಧವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮತ್ತು ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಶಕ್ತವಾಗಿರುವ ಆಯಾ ಜಿಲ್ಲೆಯ “ಸಮುದಾಯ ಅಭಿವೃದ್ಧಿ ಸಂಸ್ಥೆಗಳು” ಈ ಯುವ ಸಂವಾದ ಕಾರ್ಯಕ್ರಮವನ್ನು ನಡೆಸಲು ಮುಂದೆ ಬರಬಹುದು. ಈ ಸಂಸ್ಥೆಗಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಅಥವಾ ಸುಸ್ತಿದಾರರಲ್ಲದ 3 ಸಂಸ್ಥೆಗಳನ್ನು ಪ್ರತಿ ಜಿಲ್ಲೆಯಿಂದ ಆಯ್ಕೆ ಮಾಡಲಾಗುವುದು.
ಆಸಕ್ತಿ ಇರುವ ಜಿಲ್ಲೆಯ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳು ಆಯಾ ಜಿಲ್ಲಾ ನೆಹರು ಯುವ ಕೇಂದ್ರಗಳಲ್ಲಿ ಕೊಡಲಾಗುವುದು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಕೇಳಿರುವ ಎಲ್ಲಾ ವಿವರಗಳನ್ನು ದಾಖಲೆಗಳ ಸಮೇತ ಮಾರ್ಚ್ 10ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವಜನ ಅಧಿಕಾರಿ, ನೆಹರು ಯುವ ಕೇಂದ್ರ ಚಿತ್ರದುರ್ಗ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಕಟ್ಟಡ, ಆಕಾಶವಾಣಿ ರಸ್ತೆ, ಚಿತ್ರದುರ್ಗ, ಕಚೇರಿ ದೂರವಾಣಿ ಸಂಖ್ಯೆ 08194-222008, ಮೊಬೈಲ್ ಸಂಖ್ಯೆ 9945038684 ಸಂಪರ್ಕಿಸಬಹುದು ಎಂದು ಜಿಲ್ಲಾ ಯುವಜನ ಅಧಿಕಾರಿ ಎನ್.ಸುಹಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours