ಜ.6 ರಿಂದ ಯುವ ಲಹರಿ: 8ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02:
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ವತಿಯಿಂದ ಯುವ ಲಹರಿ-8ನೇ ಅಂತರ ಮಹಾವಿದ್ಯಾಲಯಗಳಯುವ ಜನೋತ್ಸವ ಕಾರ್ಯಕ್ರಮ ಇದೇ ಜನವರಿ 6 ರಿಂದ 8 ರವರೆಗೆ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಜನವರಿ 6ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಖ್ಯಾತ ರಂಗ ಕಲಾವಿದರು ಹಾಗೂ ನಟ ಮೋಹನ್ ಶೇಣಿ ಉದ್ಘಾಟನೆ ಮಾಡುವರು. ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಕೆ.ಮಂಜಪ್ಪ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಎನ್.ಶಿವಶಂಕರ್ ಪ್ರಸ್ತಾವಿಕವಾಗಿ ಮಾತನಾಡುವರು.
ವಿಶ್ವವಿದ್ಯಾಲಯ ವ್ಯವಸ್ಥಾಪನ ಮಂಡಳಿ ಸದಸ್ಯರಾದ ತರೀಕೆರೆ ಶಾಸಕ ಡಿ.ಎಸ್.ಸುರೇಶ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ್, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಶಿಕ್ಷಣ ತಜ್ಞ ಅರುಣ್ ಕುಮಾರ್, ಕೃಷಿ ಉದ್ದಿಮೆದಾರ ಬಿ.ಶಿವರಾಮ್, ಪ್ರಗತಿಪರ ರೈತರಾದ ದೊಡ್ಡಗೌಡ ಸಿ.ಪಾಟೀಲ್, ಕೆ.ನಾಗರಾಜ್, ವೀರಭದ್ರಪ್ಪ ಪೂಜಾರಿ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧಿಕಾರಿಗಳಾದ ಸ್ನಾತಕೋತ್ತರ ಡೀನ್ ಡಾ.ಎಂ.ದಿನೇಶ್ ಕುಮಾರ್, ಕುಲಸಚಿವ ಡಾ.ಆರ್.ಲೋಕೇಶ್, ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ.ವಾಲಿ, ವಿಸ್ತರಣಾ ನಿರ್ದೇಶಕ ಡಾ.ಹೇಮ್ಲಾನಾಯ್ಕ್, ಡೀನ್ (ಅರಣ್ಯ) ಡಾ.ಸಿ.ಜಿ.ಕುಶಾಲಪ್ಪ, ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ದುಶ್ಯಂತ್ ಕುಮಾರ್, ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ವಿಶೇಷಾಧಿಕಾರಿ ಡಾ.ಕೆ.ಸಿ.ಶಶಿಧರ್, ಕತ್ತಲಗೆರೆ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಬಿ.ಎಂ.ಆನಂದ್ ಕುಮಾರ್, ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸುದೀರ್ ಕಾಮತ್ ಭಾಗವಹಿಸುವರು.
ಜನವರಿ 8ರಂದು ಬೆಳಿಗ್ಗೆ 11.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ. ಜಗದೀಶ್, ನಿವೃತ್ತ ಕುಲಪತಿ ಡಾ.ಸಿ.ವಾಸುದೇವಪ್ಪ, ರಾಯಚೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ್ ಭಾಗವಹಿಸುವರು. ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ.ಎನ್.ಶಿವಶಂಕರ್ ಸಮಾರೋಪ ವರದಿ ವಾಚನ ಮಾಡುವರು. ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಕೆ.ಮಂಜಪ್ಪ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours