ವೇಣೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ವೇಣೂರು ಘಟಕದ ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ. 16ರಂದು ಕೊಕ್ರಾಡಿಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯುತ್ತಿದೆ.
ಸಮಾರಂಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಆಶೀರ್ವಚನ ನೀಡಿ, ಸತ್ಕಾರ್ಯಗಳಿಂದ ಎಲ್ಲರ ಮನಸ್ಸು ಗೆಲ್ಲಲು ಸಾಧ್ಯ. ಸತ್ಕಾರ್ಯಗಳಿಂದ ಸಮಾಜ ದಲ್ಲಿ ಉನ್ನತಿ ಕಾಣಲಿದ್ದೇವೆ ಎಂದರು.
ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾ ಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಮರೋಡಿ ದೇವಸ್ಥಾನದ ಪ್ರ. ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸತೀಶ್ ಕೆ., ಅಂಡಿಂಜೆ ಗ್ರಾ.ಪಂ. ಅಧ್ಯಕ್ಷ ನಿತೀನ್ ಮುಂಡೇವು ಭಾಗವಹಿಸಿದರು. ಗೌರವ ಉಪಸ್ಥಿತಿಯಲ್ಲಿ ಪಿಡಿಒ ರಾಘವೇಂದ್ರ ಪಾಟೀಲ್, ಸುಧಾಕರ್ ಡಿ., ಅಶೋಕ್ ಕುಮಾರ್ ಪಡ್ಪು, ಮಂಜಪ್ಪ ಪೂಜಾರಿ ಕೊಕ್ರಾಡಿ , ವೇಣೂರು ಘಟಕದ ನಿಯೋಜಿತ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ, ನಿಯೋಜಿತ ಪ್ರ. ಕಾರ್ಯದರ್ಶಿ ದಕ್ಷಾ ಅಂಬಲ ಅಂಡಿಂಜೆ ಸೇರಿದಂತೆ ಹಲವು ಅತಿಥಿ ಗಣ್ಯರು ಭಾಗವಹಿಸಿದರು.
ವೇಣೂರು ಯುವವಾಹಿನಿ ಸ್ಥಾಪಕ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ಅರುಣ್ ಕೋಟ್ಯಾನ್ ನಿರೂಪಿಸಿದರು.









