ಇನ್ನು 4 ದಿನ ಮಳೆ ಬಿಡಲ್ಲ. ನಿಮ್ಮ ಜಿಲ್ಲೆಯಲ್ಲಿ ಮಳೆ ಚಳಿ ಇದೆಯಾ

 

 

 

 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಎಂದು ತಿಳಿಸಿರುವ ಭಾರತೀಯ ಹವಾಮಾನ ಇಲಾಖೆ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

 

 

ನೈರುತ್ಯ ಬಂಗಾಳಕೊಲ್ಲಿಯಲ್ಲಿ 130 ಕಿಮೀ ಪೂರ್ವ ಆಗ್ನೇಯ ಚೆನ್ನೈ ಕಡೆಗೆ ಮತ್ತು 150 ಕಿಮೀ ಪುದುಚೇರಿಯ ಪೂರ್ವ ಈಶಾನ್ಯಕ್ಕೆ ಗಾಳಿ ವೇಗವಾಗಿ ಬೀಸುತ್ತಿದೆ. ಇದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್ 12 ರಿಂದ ಮಳೆಯುವ ವ್ಯಾಪಕವಾಗಲಿದೆ. ನವೆಂಬರ್ 15ರವರೆಗೆ ಭಾರೀ ಮಳೆ ದಾಖಲಾಗಲಿದೆ ಎಂದು ಬೆಂಗಳೂರಿನ ಐಎಂಡಿ ಪ್ರಭಾರ ನಿರ್ದೇಶಕಿ ಡಾ.ಗೀತಾ ಅಗ್ನಿಹೋತ್ರಿ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ವಿಶೇಷವಾಗಿ ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಪ್ರತ್ಯೇಕವಾಗಿ ಭಾರೀ ಮತ್ತು ಅತಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಚಳಿಯ ವಾತಾವರಣ ಇರಲಿದೆ ಎಂದು ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours