ಮೈಸೂರು, ಏ.29- ಎಂಟು ತಿಂಗಳ ಮಗುವನ್ನು ಸೋದರ ಮಾವನೇ ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಶಾಲೆಯ ರಸ್ತೆಯಲ್ಲಿ ನಡೆದಿದೆ.
ಕನಕಗಿರಿ ನಿವಾಸಿ ರಾಜು(33) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿ ರಾಜು ಎಂಟು ತಿಂಗಳ ಮಗುವನ್ನು ಗೋಡೆಗೆ ಬಡಿದು ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
+ There are no comments
Add yours