ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಗೆ ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಸ್ಥಾನ: ಹೈಕಮಾಂಡ್ ಪ್ಲಾನ್ ಏನು?

 

 

 

 

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಯು.ಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ.

ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು.

 

 

ಆದರೆ ಇದೀಗ ಇನ್ನೊಂದು ವರ್ಷದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ, ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯು.ಟಿ ಖಾದರ್ ಅವರನ್ನೇ ನಾಯಕನನ್ನಾಗಿ ಘೋಷಿಸಲಾಗಿದ್ದು, ಇದರ ಹಿಂದೆ ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದವರಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

[t4b-ticker]

You May Also Like

More From Author

+ There are no comments

Add yours