ಕೋವಿಡ್ 3ನೇ ಅಲೆಯಲ್ಲಿ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ಸಿದ್ಧತೆ ಕೈಗೊಳ್ಳಿ: ಜಿ.ಪಂ. ಸಿಇಒ ಡಾ.ಕೆ.ನಂದಿನಿ ದೇವಿ ಸೂಚನೆ

 

 

 

 

ಕೋವಿಡ್-19ರ 3ನೇ ಅಲೆ ಮುಂಜಾಗ್ರತೆ ಕ್ರಮಗಳ ಕುರಿತ ಕಾರ್ಯಗಾರ.
ಚಿತ್ರದುರ್ಗ,ಜುಲೈ17:
ಕೋವಿಡ್-19ರ ಮೂರನೇ ಅಲೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗೂ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳವರಿಗೆ ಕೋವಿಡ್-19 ಮೂರನೇ ಅಲೆ ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಗಾರ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಮಾತನಾಡಿ, ಕೆ.ಪಿ.ಎಂ.ಇ. ಕಾಯ್ದೆ 2005 ಮತ್ತು 2007ರ ಅಡಿಯಲ್ಲಿ ಬರುವ ನಿಯಮಾವಳಿಗಳ ಕುರಿತು ಹಾಗೂ ಉಚ್ಚನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್ ಮಾತನಾಡಿ, ಕೆಪಿಎಂ ಕಾಯ್ದೆ ಹಾಗೂ ನ್ಯಾಯಾಲಯದ ಆದೇಶದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ ಮತ್ತು ವೈದ್ಯಕೀಯ ಕಾಲೇಜ್‍ಗಳವರು ಕಡ್ಡಾಯವಾಗಿ ಕೋವಿಡ್-19 ಮೂರನೇ ಅಲೆ ಮುಂಜಾಗ್ರತೆ ಹಿನ್ನಲೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಬಗ್ಗೆ ಕಟ್ಟುನಿಟ್ಟಾಗಿ ಆದೇಶ ಪಾಲನೆ ಮಾಡಬೇಕು ಎಂದು ಸೂಚಿಸಿದರು.
ಕೋವಿಡ್-19ರ ಮೂರನೇ ಅಲೆ ಮುಂಜಾಗ್ರತೆ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜರ್ ಕೆ.ಎನ್. ಸ್ಪೂರ್ತಿ ಸುಹಾನ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ. ಸಾಲಿಮಂಜಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ತುಳಸಿರಂಗನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಖಾಸಗಿ ಆಸ್ಪತ್ರೆ ಸಂಘದ ಅಧ್ಯಕ್ಷರಾದ ಡಾ. ರಂಗಾರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ. ಕೃಷ್ಣನಾಯ್ಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಹನುಮಂತಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಮಕ್ಕಳ ವೈದ್ಯರಾದ ಡಾ. ಪಿ.ಎನ್ ಪ್ರವೀಣ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours