ಕೋವಿಡ್ ಓಟಕ್ಕೆ ಬ್ರೇಕ್ ಬಿದ್ದಂತಿದೆ, ಜಿಲ್ಲೆಯಲ್ಲಿ 261 ಜನರಿಗೆ ಕೋವಿಡ್ ಸೋಂಕು ದೃಢ: 283 ಮಂದಿ ಬಿಡುಗಡೆ

 

 

 

 

ಜಿಲ್ಲೆಯಲ್ಲಿ 261 ಜನರಿಗೆ ಕೋವಿಡ್ ಸೋಂಕು ದೃಢ: 283 ಮಂದಿ ಬಿಡುಗಡೆ
*****
ಚಿತ್ರದುರ್ಗ,ಜೂನ್06:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 261 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 32,261ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 39, ಚಳ್ಳಕೆರೆ 81, ಹಿರಿಯೂರು 15, ಹೊಳಲ್ಕೆರೆ 53, ಹೊಸದುರ್ಗ 63, ಮೊಳಕಾಲ್ಮುರು ತಾಲ್ಲೂಕಿನ 10 ಪ್ರಕರಣಗಳು ಸೇರಿದಂತೆ ಒಟ್ಟು 261 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 283 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 2556 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 261 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 32,261ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 156 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 24,977 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 7,128 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 355312 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 5,00,315 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,67,188 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 26 ಜನರ ವರದಿ ಬರುವುದು ಬಾಕಿ ಇದೆ. 840 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
=======

 

 

[t4b-ticker]

You May Also Like

More From Author

+ There are no comments

Add yours