ಖಾಸಗಿ ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಲು ನ್ಯಾಯಾಧೀಶ ಗಿರೀಶ್.ಬಿ.ಕೆ ಸೂಚನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 25:
ಚಿತ್ರದುರ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಎಲ್ಲೆಂದರೆ ಅಲ್ಲಿ ಮೂತ್ರ ವಿಸರ್ಜನೆ ಮಾಡುವುದು ಕಂಡುಬರುತ್ತಿದೆ. ಇದರಿಂದ ಸಾರ್ವಜನಿಕರು ಸ್ಥಳದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಅನೈರ್ಮಲ್ಯದಿಂದಾಗಿ ಜನರ ಆರೋಗ್ಯ ಹದಗೆಡುವ ಪರಿಸ್ಥಿತಿಯಿದೆ. ಕೂಡಲೇ ನಗರ ಸಭೆಯ ಅಧಿಕಾರಿಗಳು ಮುತುವರ್ಜಿ ವಹಿಸಿ, ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕಾಪಾಡಬೇಕು ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಿರೀಶ್ ಬಿ.ಕೆ. ಸೂಚನೆ ನೀಡಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿನ ಕಚೇರಿಯಲ್ಲಿ ಬುಧವಾರ ಈ ಕುರಿತು ನಗರಸಭೆಯ ಆರೋಗ್ಯ ನಿರೀಕ್ಷಕಿ ಭಾರತಿ ಅವರೊಂದಿಗೆ ಚರ್ಚಿಸಿದರು.
ಜನರು ಮೂತ್ರವಿಸರ್ಜನೆ ಮಾಡುವ ಜಾಗವನ್ನು ಸ್ವಚ್ಚಗೊಳಿಸಿ ಸುಣ್ಣ ಬಣ್ಣ ಬಳಿಸಬೇಕು. ಸಾರ್ವಜನಿಕರ ಗಮನಕ್ಕೆ ಬರುವ ಹಾಗೆ ಫಲಕಗಳನ್ನು ಅಳವಡಿಸಬೇಕು. ಬಸ್ ನಿಲ್ದಾಣದ ಸುತ್ತ ಮುತ್ತ ಸಿಸಿ ಟಿವಿ ಕ್ಯಾಮರಾ ಅಳವಡಿಸಿ, ನಿಯಮ ಮೀರಿದವರ ವಿರುದ್ಧ ದಂಡ ಹಾಕಿ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ಅವರು ಸಹ ದಂಡ ವಿಧಿಸುತ್ತಾರೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಜವಾಬ್ದಾರಿ ನಗರಸಭೆಯ ಮೇಲಿದೆ. ಜನಸಂಖ್ಯೆ ಹೆಚ್ಚಿರುವ ಸ್ಥಳಗಳಲ್ಲಿ ಸುಲಭ ಶೌಚಾಲಯಗಳನ್ನು ತೆರಯಬೇಕು. ಒಂದು ವಾರದಲ್ಲಿ ಅನೈರ್ಮಲ್ಯದ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಹಾಗೂ ಈ ಕುರಿತು ವರದಿ ನೀಡುವಂತೆ ಸೂಚನೆ ನೀಡಿದರು.

 

 

[t4b-ticker]

You May Also Like

More From Author

+ There are no comments

Add yours