ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ : ಗ್ರಾಮ ಸ್ವರಾಜ್ ಕಲ್ಪನೆಗೆ ಮುನ್ನುಡಿ:ಕೃಷಿ ಸಚಿವ ಬಿ.ಸಿ.ಪಾಟೀಲ್

 

 

 

 

ಗ್ರಾಮ ಪಂಚಾಯಿತಿ ಆಡಳಿತ ಅನುಕೂಲಕ್ಕೆ ಗ್ರಾಮಸೌಧ ನಿರ್ಮಾಣ
ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 20: ಮಹಾತ್ಮ ಗಾಂಧೀಜಿ ಕಂಡAತಹ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡಲು ಅಧಿಕಾರ ವಿಕೇಂದ್ರಿಕರಣ ತತ್ವದ ಅಡಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಬೆಂಗಳೂರಿನಲ್ಲಿ ರಾಜ್ಯದ ಆಡಳಿತ ನೆಡೆಸಲು ವಿಧಾನಸೌಧ ಇದ್ದ ಹಾಗೆ, ಪ್ರತಿ ಗ್ರಾಮ ಪಂಚಾಯಿತಿಗೂ ಆಡಳಿತದ ಅನುಕೂಲಕ್ಕಾಗಿ ಗ್ರಾಮ ಸೌಧ ನಿರ್ಮಿಸಲು ಸರ್ಕಾರ ಚಿಂತೆನೆ ನಡೆಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಚಿತ್ರದುರ್ಗ ತಾಲೂಕಿನ ಬ್ಯಾಲಹಾಳ್ ಗ್ರಾಮದಲ್ಲಿ 48 ಲಕ್ಷ ವೆಚ್ಚದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ಗ್ರಾಮಸೌಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಯ ಅನುದಾನಕ್ಕಾಗಿ ಶಾಸಕರು ಹಾಗು ಮಂತ್ರಿಗಳ ದುಂಬಾಲು ಬೀಳುವ ಪರಿಸ್ಥಿತಿ ಈಗ ಇಲ್ಲ. ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳನ್ನು ತಯಾರಿಸಿ, ಸ್ವತಃ ಅನುಮೋದನೆ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿವೆ. ಸರ್ಕಾರ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಗ್ರಾಮದಲ್ಲಿ ಉತ್ತಮ ಕೆಲಸ ಮಾಡುವುದರ ಮೂಲಕ ಜನರ ಅಭಿಮಾನವನ್ನು ಸಂಪಾದಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ 25 ಜನ ಸದಸ್ಯರು ಇರುವಂತಹ ಗ್ರಾಮ ಪಂಚಾಯಿತಿಗೆ 40 ಮನೆಗಳು, 15 ಜನ ಸದಸ್ಯರು ಇರುವಂತಹ ಗ್ರಾಮ ಪಂಚಾಯಿತಿಗೆ 30 ಮನೆಗಳು, 15 ಜನಕ್ಕಿಂತ ಕಡಿಮೆ ಇರುವಂತಹ ಗ್ರಾಮ ಪಂಚಾಯಿತಿಗೆ 20 ಮನೆಗಳನ್ನ ನೀಡಲಾಗಿದೆ. ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬ್ಯಾಲಹಾಳ್ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿ ಎನಿಸುವ ಗ್ರಾಮಸೌಧವನ್ನು ಇಲ್ಲಿನ ಅಧ್ಯಕ್ಷರು ಹಾಗೂ ಸದಸ್ಯರು ಸಾಕಷ್ಟು ಆಸಕ್ತಿ ವಹಿಸಿ ನಿರ್ಮಿಸಿದ್ದಾರೆ. ಸರ್ಕಾರ ಅನುದಾನ ಜೊತೆಗೆ ವಂತಿಕೆ ಹಣವನ್ನು ಸಂಗ್ರಹಿಸಿ ಭವ್ಯವಾದ ಗ್ರಾಮಸೌಧ ನಿರ್ಮಿಸಿರುವುದು ಮಾದರಿಯಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಪ್ರಶಂಸಿಸಿದರು.
ನೂತನ ಶಾಲಾ ಕೊಠಡಿಗಳ ಉದ್ಘಾಟನೆ ರಸ್ತೆ ಕಾಮಗಾರಿಗೆ ಭೂಮಿ ಪೂಜೆ : ಬ್ಯಾಲಹಾಳ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಸಕರ 20 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾಗಿರುವ 3 ಶಾಲಾ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟಿಸಿದರು. ಕಬ್ಬಿಗೇರಿ ಗ್ರಾಮದಿಂದ ಬ್ಯಾಲಹಾಳ್ ಗ್ರಾಮ ಪಂಚಾಯಿತಿ ಸಂಪರ್ಕಿಸುವ 15 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿ.ಪಂ.ಸಿಇಓ ಡಾ.ಕೆ.ನಂದಿನಿದೇವಿ, ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ತಾ.ಪಂ.ಇಓ ಹನುಮಂತಪ್ಪ.ಹೆಚ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೊಯಿನ್ ಆಸ್ಮಾ ಸೇರಿದಂತೆ ಇತರೆ ಗ್ರಾ.ಪಂ. ಸದ್ಯರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours