ಗ್ರಾಮಲೆಕ್ಕಾಧಿಕಾರಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ದಾಖಲಾತಿ ಪರಿಶೀಲನೆಗೆ ಹಾಜರಾಗಲು ಸೂಚನೆ

 

 

 

 

ಗ್ರಾಮಲೆಕ್ಕಾಧಿಕಾರಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ದಾಖಲಾತಿ ಪರಿಶೀಲನೆಗೆ ಹಾಜರಾಗಲು ಸೂಚನೆ
ಚಿತ್ರದುರ್ಗ,ನವೆಂಬರ್06:
ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ತಾತ್ಕಾಲಿಕ ಪರಿಶೀಲನಾ ಆಯ್ಕೆಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ವೆಬ್‍ಸೈಟ್ https://chitradurga-va.kar.nic.inನಲ್ಲಿ ಪ್ರಕಟಿಸಲಾಗಿತ್ತು.
ತಾತ್ಕಾಲಿಕ ಪರಿಶೀಲನಾ ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗದಲ್ಲಿ (ಜಿ.ಎಂ)ಆಯ್ಕೆಯಾಗಿರುವ ಅಭ್ಯರ್ಥಿಗಳು ನವೆಂಬರ್ 24ರಂದು ಹಾಗೂ ಪ.ಜಾತಿ, ಪ.ಪಂಗಡ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು ನವೆಂಬರ್ 25ರಂದು ಬೆಳಿಗ್ಗೆ 10.30 ಗಂಟೆಗೆ ಮೂಲ ಹಾಗೂ ಒಂದು ಸೆಟ್ ದೃಢೀಕೃತ ದಾಖಲಾತಿಗಳೊಂದಿಗೆ ದಾಖಲಾತಿ ಪರಿಶೀಲನೆಗಾಗಿ ಕ್ರೀಡಾ ಭವನ, ಜಿಲ್ಲಾ ಕ್ರೀಡಾಂಗಣ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಇಲ್ಲಿಗೆ ಖುದ್ದು ಹಾಜರಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
=====

 

 

[t4b-ticker]

You May Also Like

More From Author

+ There are no comments

Add yours