ಜ.29ರಂದು ತೋಟಗಾರಿಕೆ ಸಚಿವ ಮುನಿರತ್ನ ಜಿಲ್ಲಾ ಪ್ರವಾಸ

 

 

 

 

ಚಿತ್ರದುರ್ಗ,ಜನವರಿ28:
ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಜನವರಿ 29ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಜ.29ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಇ-ಕಚೇರಿ, ಜಾಲತಾಣ ಮತ್ತು ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಸುಡುಗಾಡು ಸಿದ್ದ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 1.30ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ, ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಸಂಜೆ 5.30ಕ್ಕೆ ಹೊಸದುರ್ಗದಲ್ಲಿ ಕಮ್ಮ ಸಮುದಾಯ ಭವನದ ವೀಕ್ಷಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಭಾಗಿ, ರಾತ್ರಿ 7ಕ್ಕೆ ಬಳ್ಳಾಸಮುದ್ರ ಗ್ರಾಮಕ್ಕೆ ಭೇಟಿ ಮತ್ತು ಸನ್ಮಾನ ಸಮಾರಂಭದಲ್ಲಿ ಭಾಗಿ. ರಾತ್ರಿ 8ಕ್ಕೆ ಹಿರಿಯೂರಿನ ವಾಣಿವಿಲಾಸ ಸಾಗರ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours