ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

 

 

 

 

ಚಿತ್ರದುರ್ಗ, ಆಗಸ್ಟ್14:
ಕೋವಿಡ್-19ರ ಸಂಭಾವ್ಯ ಮೂರನೇ ಅಲೆ ಹಾಗೂ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.
ಕೋವಿಡ್-19ರ ಸಾಂಕ್ರಾಮಿಕ ರೋಗದಿಂದಾಗಿ ಇದೇ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಕೋವಿಡ್ ಕಾರಣದಿಂದಾಗಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಹೋಗಿ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಕೋವಿಡ್-19ರ ಹಿನ್ನಲೆಯಲ್ಲಿ ಸರ್ಕಾರದ ಆದೇಶದಂತೆ ಕಳೆದ ಬಾರಿಯಂತೆ ಈ ಬಾರಿಯೂ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಆಗಮಿಸಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.
ಭಾರತ ಸ್ವಾತಂತ್ರ್ಯೋತ್ಸವ 75ನೇ ವರ್ಷದ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನ ನಿಜಕ್ಕೂ ಸ್ಮರಣೀಯವಾದದು. ಹೋರಾಟಗಾರರ ತ್ಯಾಗ, ಬಲಿದಾನದಿಂದ ನಾವು ಸ್ವತಂತ್ರರಾಗಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ.ಭೀಮಪ್ಪ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಬೇಕು ಎಂದು ತೀರ್ಮಾನಿಸಿ ಸ್ನೇಹಿತರ ಜೊತೆಗೆ ಎಸ್.ನಿಜಲಿಂಗಪ್ಪ ಅವರ ಅನುಯಾಯಿಗಳಾಗಿ ಕೆಲಸ ಮಾಡಿದೆವು. ಈಚಲು ಮರದ ಸತ್ಯಾಗ್ರಹದಲ್ಲಿ ಭಾಗಹಿಸಿ, ಹೆಂಡದ ಅಂಗಡಿಗಳನ್ನು ನಾಶ ಮಾಡಲಾಯಿತು. ಇದಕ್ಕಾಗಿ ಕೆಲವು ದಿನಗಳ ಕಾಲ ಬಂಧನದಲ್ಲಿಟ್ಟು, ಗಡಿಪಾರು ಮಾಡಲಾಯಿತು. ನಂತರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದರಿಂದ ಒಂದು ವರ್ಷ ವಿದ್ಯಾಭ್ಯಾಸ ಸ್ಥಗಿತವಾಯಿತು. ಆದಾಗ್ಯೂ ಭಾರತ ಸ್ವಾತಂತ್ರ್ಯ ಪಡೆಯಬೇಕು ಎಂದು ಬ್ರಿಟೀಷರ ವಿರುದ್ಧ ಹೋರಾಟ ನಡೆಸಿದೆ. ಸ್ವಾತಂತ್ರ್ಯ ಪಡೆಯಲಾಯಿತು ಎಂದು ತಮ್ಮ ಅನುಭವ ಹಂಚಿಕೊಂಡರು.
ಈಗಿನ ಯುವಕರು ಹೆಚ್ಚಾಗಿ ಆಟಪಾಠದಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆಯಲ್ಲಿಯೂ ಸಹ ಒಲಿಂಪಿಕ್ಸ್‍ನಂತಹ ಕ್ರೀಡಾಕೂಟದಲ್ಲಿ ಹೆಚ್ಚು ಹೆಚ್ಚು ಯುವಕರು ಪಾಲ್ಗೊಂಡು ಪದಕಗಳನ್ನು ತರುವಂತಾಗಬೇಕು ಎಂದು ಯುವ ಜನ ಕುರಿತಂತೆ ತಮ್ಮ ಆಶಯ ವ್ಯಕ್ತಪಡಿಸಿದರು.

 

 

 


ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಎ.ಭೀಮಪ್ಪ ಹಾಗೂ ನರೇನಾಳ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ತಿಮ್ಮಾರೆಡ್ಡಿ, ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಹನುಮಂತಪ್ಪ (ಮಡಿವಾಳರ) ಮತ್ತು ಭೀಮಪ್ಪ ಹಾಗೂ ಹಿರಿಯೂರು ತಾಲ್ಲೂಕಿನ ಕೋವೇರಹಟ್ಟಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷರಾದ ಎ.ಗೋವಿಂದಪ್ಪ ಸೇರಿದಂತೆ ಐದು ಮಂದಿ ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಿತ್ರದುರ್ಗ ತಹಶೀಲ್ದಾರ್ ಸತ್ಯನಾರಾಯಣ, ಹಿರಿಯೂರು ತಹಶೀಲ್ದಾರ್ ಶಿವಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಸ್ಭೆರಿದಂತೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
=======

[t4b-ticker]

You May Also Like

More From Author

+ There are no comments

Add yours