ಚಿತ್ರದುರ್ಗ, ಏ.11:
ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ವಾರ್ತಾಧಿಕಾರಿಗಳಾಗಿ (ಸಹಾಯಕ ನಿರ್ದೇಶಕರು) ಜೆ.ಮಂಜೇಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು.
ಚಿತ್ರದುರ್ಗ ನಗರದ ಜಿಲ್ಲಾಡಳಿತ ಭವನದ ಹಿಂಭಾಗದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಅವರು ಜೆ.ಮಂಜೇಗೌಡರಿಗೆ ಅಧಿಕಾರ ಹಸ್ತಾಂತರಿಸಿದರು.
ಚಿಕ್ಕಮಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಜೆ.ಮಂಜೇಗೌಡ ಅವರನ್ನು ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಧನಂಜಯ ಅವರನ್ನು ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
[t4b-ticker]
+ There are no comments
Add yours