ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಹ ಧನಕ್ಕೆ ಅರ್ಜಿ ಆಹ್ವಾನ

 

 

 

 

ಬೆಂಗಳೂರು:  2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್‌ನಲ್ಲಿ  ಮೂಲಕ  ಅರ್ಜಿ ಆಹ್ವಾನಿಸಲಾಗಿದೆ.

 

 

ಪ್ರೋತ್ಸಾಹ ಧನ ಮಂಜೂರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜೂನ್ 10ರ ವರೆಗೆ ವಿಸ್ತರಿಸಲಾಗಿದೆ.

ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ಇಲಾಖೆಗೆ ಸಂಬಂಧಿಸಿದಂತೆ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನದ ನಂತರ ಬರುವ ಯಾವುದೇ ಸ್ವಯಂಕೃತ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours