ಫಸ್ಟ್ ಬ್ಯಾಂಕ್ ವತಿಯಿಂದ ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಕೊಡುಗೆ

 

 

 

 

ಚಿತ್ರದುರ್ಗ,ಜೂನ್29:

 

 

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ವತಿಯಿಂದ ಒಂದು ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಯೂನಿಟ್ ಅನ್ನು ಮಂಗಳವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ವತಿಯಿಂದ ಕೋವಿಡ್ ಲಾಕ್‍ಡೌನ್‍ನಿಂದ ತೊಂದರೆಗೆ ಒಳಗಾದ 150 ಗ್ರಾಹಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಐಡಿಎಫ್‍ಸಿ ಫಸ್ಟ್ ಬ್ಯಾಂಕಿನ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ವತಿಯಿಂದ ಒಂದು ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಯೂನಿಟ್ ಅನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
=======

[t4b-ticker]

You May Also Like

More From Author

+ There are no comments

Add yours