ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಕೋವಿಡ್ 19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ

 

 

 

 

ಹಿರಿಯೂರು ನಗರದ ನೆಹರೂ ಮಾರುಕಟ್ಟೆಯಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಕೋವಿಡ್ 19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನವನ್ನು ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಚಾಲನೆ ನೀಡಿದರು.

 

 

3ನೆ ಅಲೆ ಅತಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ಸಂಪರ್ಕ ಇರುವ ಬೀದಿ ಬದಿ ವ್ಯಾಪಾರಿಗಳು ವರ್ತಕರು ಮುಂತಾದವರಿಗೆ ಇಂದಿನಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಹಾಕಿಸಿಕೊಳ್ಳಲು ಶಾಸಕರು ಮನವಿ ಮಾಡಿದರು. ಸೋಂಕಿತರಿಗೆ ಸ್ಥಳದಲ್ಲೇ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ .ಡಿ .ಟಿ .ಶ್ರೀನಿವಾಸ್ ರವರು 3ನೇ ಅಲೆಯನ್ನು ಹಿರಿಯೂರು ತಾಲ್ಲೂಕಿನಲ್ಲಿ ತಡೆಗಟ್ಟಲು ಸರ್ಕಾರದ ನಿಯಮಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಂ.ಎಸ್.ರಾಘವೇಂದ್ರ ರವರ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ ವೆಂಕಟೇಶ್, ಡಿವೈಎಸ್ಪಿ ರೋಷನ್ ಜಮೀರ್, ನಗರಸಭೆ ಆಯುಕ್ತ ಉಮೇಶ್, ಜಿಪಂ ಮಾಜಿ ಸದಸ್ಯೆ ಶ್ರೀಮತಿ ರಾಜೇಶ್ವರಿ, ನಗರಸಭೆ ಮಾಜಿ ಅಧ್ಯಕ್ಷ ಟಿ ಚಂದ್ರಶೇಖರ್, ಸದಸ್ಯರಾದ ಪಲ್ಲವ, ಸರವಣ ಇನ್ನು ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours