ಮಕ್ಕಳಲ್ಲಿನ ಪ್ರತಿಭೆಯನ್ನು ಶಿಕ್ಷಕರ ಗುರುತಿಸುವಂತ್ತಾಗಬೇಕು:ತಹಶೀಲ್ದಾರ್ ಎನ್.ರಘುಮೂರ್ತಿ

 

 

 

 

ಮಕ್ಕಳಲ್ಲಿನ ಪ್ರತಿಭೆಯನ್ನು ಶಿಕ್ಷಕರ ಗುರುತಿಸುವಂತ್ತಾಗಬೇಕು. ಪ್ರತಿಯೊಬ್ಬ ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇದ್ದೇ ಇರುತ್ತದೆ ಅಂತಹ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವಂತಹ ಕೆಲಸವಾಗಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.
ನಗರದ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ,ಕನ್ನಡ ರಾಜ್ಯೋತ್ಸವ, ಕಾರ್ಯಕ್ರದ ಉದ್ಘಾಟನೆಯನ್ನು ನೇರವೇರಿಸಿ ಅವರು ಮಾತನಾಡಿದರು.ಜೀವನದ ಗುರಿ, ಉದ್ದೇಶಗಳನ್ನು, ಅವುಗಳನ್ನು ಸಾಧಿಸುವ ಮಾರ್ಗಗಳನ್ನು, ಧ್ಯೇಯವನ್ನು, ವಿದ್ಯಾರ್ಥಿಗಳ ಮನಸಲ್ಲಿ ಸೃಷ್ಟಿ ಮಾಡುವವನು, ಅವು ಪಕ್ವವಾಗಿ ಬೆಳೆಯುವಂತೆ ವಿವಿಧ ತತ್ವಗಳನ್ನು ತಲೆಯಲ್ಲಿ ತುಂಬುವವನು ಮತ್ತು ದಾರಿತಪ್ಪುವ ವಿದ್ಯಾರ್ಥಿಗಳ ನಡೆ ನುಡಿಗಳನ್ನು, ವಿದ್ಯಾರ್ಥಿಗಳಲ್ಲಿನ ಕೆಟ್ಟ ಯೋಚನೆಗಳನ್ನು ನಾಶಮಾಡಿ ಸರಿಯಾದ ದಾರಿಯನ್ನು ತೋರುವವನು ಗುರುವೇ ಆಗಿದ್ದಾನೆ. ಮಕ್ಕಳನ್ನು ತಿದ್ದಿ ತೀಡಿ ಒಂದು ಹಂತಕ್ಕೆ ತಂದು ಅವರಜೀವನಕ್ಕೆ ದಾರಿ ಮಾಡಿಕೊವವರು ಎಂದರು ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಅಧ್ಯಕ್ಷ ಮಂಜುನಾಥ್ ಸದಸ್ಯರಾದ ನಾಗರಾಜ್ ಶ್ರೀನಿವಾಸ್ ಸೋಮಶೇಖರ್ ರೇಣುಕಾ ವೀರೇಶ್ ಸುಮಯ ಕೌಸರ್ ರೇಖಾ ಜಿಎಂ ವೀರಭದ್ರಪ್ಪ ಎಸ್ ಪವನ ಡಿಎಸ್ ಶಾಂತಕುಮಾರ್ ಕುಮಾರ್ ಹಾಗೂ ಶಾಲಾ ಮಕ್ಕಳು ಇದ್ದರು

 

 

[t4b-ticker]

You May Also Like

More From Author

+ There are no comments

Add yours