ಮಲೇರಿಯಾ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸೋಣ: ಡಾ.ಜಯಶ್ರೀ

 

 

 

 

ಚಿತ್ರದುರ್ಗ,ಜೂನ್29:
ಮಲೇರಿಯಾ ನಿರ್ಮೂಲನೆಗೆ ಎಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಒಟ್ಟಾಗಿ ಮಲೇರಿಯಾ ನಿಯಂತ್ರಿಸೋಣ ಎಂದು ಆಡಳಿತ ವೈದ್ಯಾಧಿಕಾರಿ ಡಾ.ಜಯಶ್ರೀ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಗ್ರಾಮದ ಸರ್ಕಾರಿ ಪಾಠಶಾಲೆ ಆವರಣದಲ್ಲಿ ಮಂಗಳವಾರ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರು ಸ್ವಚ್ಛತೆಗೆ ಒತ್ತು ನೀಡುವ ಮೂಲಕ ಮಲೇರಿಯಾ ನಿರ್ಮೂಲನೆಗೆ ಸಹಕರಿಸಬೇಕು ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಎಲ್ಲರೂ ಕೊರೊನಾ ವಿರುದ್ಧ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಚಾಚುತಪ್ಪದೇ ಪಾಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಕೈಗಳ ಶುಚಿತ್ವ ಪಾಲಿಸಬೇಕು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಸೊಳ್ಳೆಗಳ ನಿಯಂತ್ರಣ, ಪರಿಸರ ನೈರ್ಮಲ್ಯದ ಬಗ್ಗೆ ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ ಮಾತನಾಡಿ, ಬಾಲ್ಯ ವಿವಾಹ ಆಗ ಕೂಡದು. ಇದು ಒಂದು ಸಾಮಾಜಿಕ ಪಿಡುಗು ಇದರಿಂದ ಅಪೌಷ್ಠಿಕ ಮಕ್ಕಳ ಜನನವಾಗುತ್ತದೆ. ತಾಯಿ ಮರಣ ಶಿಶು ಮರಣ ಸಂಖ್ಯೆ ಜಾಸ್ತಿಯಾಗುತ್ತದೆ. ಆದುದರಿಂದ ದಯವಿಟ್ಟು ಬಾಲ್ಯವಿವಾಹ ತಡೆಯಿರಿ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕರಿಯಪ್ಪ, ಮಂಜುನಾಥ್, ಆರೋಗ್ಯ ನಿರೀಕ್ಷಣಾಧಿಕಾರಿ ಸುನಿಲ್, ವಿಜಯಕುಮಾರ್, ಆಶಾ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours