ಮೇ 30 ರಿಂದ ಜೂನ್ 01 ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.26:
2021-22ನೇ ಸಾಲಿನಲ್ಲಿ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ಮೇ 30ರಿಂದ ಜೂನ್ 1ರವರೆಗೆ ಏರ್ಪಡಿಸಲಾಗಿರುತ್ತದೆ.
2022ರ ಏಪ್ರಿಲ್ 21 ಮತ್ತು 22ರಂದು ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2021-22ನೇ ಸಾಲಿನ ಚಿತ್ರದುರ್ಗ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ತೆರಳಲು ಅರ್ಹರಾಗಿದ್ದಾರೆ.
ಆದುದರಿಂದ ಇದೇ ಮೇ 30ರಂದು ಮಧ್ಯಾಹ್ನ 12 ಗಂಟೆಯ ಒಳಗಾಗಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಂಠೀರವಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours