ವಿಜಯೇಂದ್ರಗೆ ಟಿಕೆಟ್: ಕುತೂಹಲ
ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ತಿನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಲಾಗಿತ್ತು. ಹೈಕಮಾಂಡ್ ನಾಯಕರು ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಚುನಾವಣೆಗೆ ಆಯ್ಕೆ ಮಾಡುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.ಒಂದು ವೇಳೆ ವಂಶ ಪಾರಂಪರ್ಯ ರಾಜಕಾರಣದ ನೆಪವೊಡ್ಡಿ ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿಸದಿದ್ದರೆ ಅದು ಪಕ್ಷದ ಮೇಲೆ ಬೇರೆ ರೀತಿಯ ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದರೆ ಯಡಿಯೂರಪ್ಪ ಸಹ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದರೆ ಮುಂದೇನು ಎಂಬ ಚಿಂತೆಯೂ ರಾಜ್ಯ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಹೈಕಮಾಂಡ್ನ ತೀರ್ಮಾನ ಏನಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಅವರ ಜತೆ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ರೆಡ್ಡಿ, ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ರವರ ಪತ್ನಿ ತೇಜಸ್ವಿನಿ ಅನಂತಕುಮಾರ್, ಹಿಂದುಳಿದ ವರ್ಗದ ಸಿದ್ದರಾಜು, ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಸೇರಿದಂತೆ ಹಲವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.ಎಲ್ಲವನ್ನು ಪರಿಗಣಿಸಿ ಹೈಕಮಾಂಡ್ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದೆ.
[t4b-ticker]
+ There are no comments
Add yours