ಚಿತ್ರದುರ್ಗ,ಜುಲೈ30:
ಚಿತ್ರದುರ್ಗ ನಗರದಲ್ಲಿ ಸರ್ಕಾರಿ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿಗಳ ಸಂಖ್ಯೆ ಬಲ 200 ವಿದ್ಯಾರ್ಥಿಗಳಿಗೆ ಎಲ್ಲಾ ಮೂಲ ಸೌಕರ್ಯಗಳ ಒಳಗೊಂಡ ಸುಸಜ್ಜಿತ ನತ್ತು ಸುರಕ್ಷತೆ ಹೊಂದಿರುವ ಹಾಗೂ ವಿದ್ಯಾರ್ಥಿಗಳ ವಾಸಕ್ಕೆ ಯೋಗ್ಯವಾದ ಬಾಡಿಗೆ ಕಟ್ಟಡ ಬೇಕಾಗಿದೆ.
ಕಟ್ಟಡದ ಬಾಡಿಗೆ ಲೋಕೋಪಯೋಗಿ ಇಲಾಖೆಯವರು ನಿಗದಿ ಪಡಿಸಿದ ಬಾಡಿಗೆ ನೀಡಲಾಗುವುದು. ಇಲಾಖೆಯ ಎಲ್ಲಾ ಷರತ್ತುಗಳನ್ನು ಪೂರೈಸುವ ನಿಬಂಧನೆಗಳಿಗೆ ಒಳಪಟ್ಟು ಬಾಡಿಗೆ ನೀಡುವ ಕಟ್ಟಡ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ತಾಲ್ಲೂಕು, ಸಹಾಯಕ ನಿರ್ದೇಶಕರು (ಗ್ರೇಡ್-1), ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ವಿಜ್ಞಾನ ಕಾಲೇಜು ಎದುರು ಇಲ್ಲಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[t4b-ticker]
+ There are no comments
Add yours