ವಿಪತ್ತು ಪರಿಸ್ಥಿತಿ ನಿರ್ವಹಣೆ: ಅಣುಕು ಪ್ರದರ್ಶನ

 

 

 

 

ಚಿತ್ರದುರ್ಗ,ಫೆಬ್ರವರಿ05:
ಚಿತ್ರದುರ್ಗ ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಶನಿವಾರ ವಿಪತ್ತು ಪರಿಸ್ಥಿತಿ ನಿರ್ವಹಣೆಯ ಕುರಿತು ಅಣುಕು ಪ್ರದರ್ಶನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ, ಜಿಲ್ಲಾ ಅಗ್ನಿಶಾಮಕ ಇಲಾಖೆ ಹಾಗೂ ವಿದ್ಯಾ ವಿಕಾಸ ವಿದ್ಯಾಸಂಸ್ಥೆ ವತಿಯಿಂದ ಶಾಲಾ ಮಕ್ಕಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ವಿಪತ್ತು ಪರಿಸ್ಥಿತಿ ನಿರ್ವಹಣೆಯ ಕುರಿತು ಅಣುಕು ಪ್ರದರ್ಶನ ನೀಡಲಾಯಿತು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಾಕೃತಿಕ ವಿಪತ್ತುಗಳು ಹಾಗೂ ನಮ್ಮ ವಾಸಸ್ಥಳಗಳಲ್ಲಿ ಯಾವುದೇ ಅಗ್ನಿ ಅನಾಹುತಗಳು ಸಂಭವಿಸಿದಾಗ ಪ್ರಜ್ಞಾವಂತ ನಾಗರೀಕರಾದ ನಾವೆಲ್ಲರೂ ಹೇಗೆ ಅಮೂಲ್ಯವಾದ ಜೀವಗಳನ್ನು ಹಾಗೂ ಆಸ್ತಿಪಾಸ್ತಿಗಳನ್ನು ಸಂರಕ್ಷಿಸಿಕೊಳ್ಳಬಹುದೆಂದು ವಿವರವಾಗಿ ತಿಳಿಸಿದರು. ಅಲ್ಲದೇ ಮಕ್ಕಳೊಂದಿಗೆ ಇಂತಹ ಪರಿಸ್ಥಿತಿಗಳಲ್ಲಿನ ಅನುಭವಗಳನ್ನು ಹಂಚಿಕೊಂಡರು.
ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಕೆ.ಎಂ ಪುಟ್ಟಸ್ವಾಮಿ ಮಾತನಾಡಿ, ಅಗ್ನಿಶಾಮಕ ದಳದವರು ಪ್ರಾಕೃತಿಕ ವಿಪತ್ತುಗಳು ನಡೆದ ಸಂಭವಿಸಿದ ಸಂದರ್ಭದಲ್ಲಿ ಹೇಗೆ ಪ್ರಾಣಾಪಾಯದಿಂದ ಪಾರಾಗಬಹುದು ಹಾಗೂ ಬೆಂಕಿಯಲ್ಲಿ ಸಿಲುಕಿಕೊಂಡವರನ್ನು ಹೇಗೆ ರಕ್ಷಿಸಬಹುದು ಎಂಬುದರ ಬಗ್ಗೆ ಮಕ್ಕಳಿಗೆ ಮನವರಿಕೆಯಾಗುವಂತೆ ತಿಳಿಸಿದರು.
ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯಕುಮಾರ್ ಮಾತನಾಡಿ., ವಿಪತ್ತು ಪರಿಸ್ಥಿತಿ ನಿರ್ವಹಣೆಯ ಅಣುಕು ಕಾರ್ಯಕ್ರಮ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಹೇಳಿದರು.
ಅಗ್ನಿಶಾಮಕ ಠಾಣಾಧಿಕಾರಿ ಜಿ.ಮಹಲಿಂಗಪ್ಪ ಅವರ ಮಾರ್ಗದರ್ಶನಲ್ಲಿ ವಿಪತ್ತು ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಾತ್ಯಕ್ಷತೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ  ಜಿಲ್ಲಾ ವಿಪತ್ತು ಪರಿಸ್ಥಿತಿ ನಿರ್ವಹಣಾಧಿಕಾರಿ ಸಮರ್ಥ್, ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

 

[t4b-ticker]

You May Also Like

More From Author

+ There are no comments

Add yours