ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.

 

 

 

 

ಚಿತ್ರದುರ್ಗ,ಆಗಸ್ಟ್27:
2021-22ನೇ ಸಾಲಿಗೆ ಚೇತನ, ಧನಶ್ರೀ ಹಾಗೂ ಲಿಂಗತ್ವ  ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ದೇವದಾಸಿ ಪುನರ್ವಸತಿ  ಯೋಜನೆಗಳ ಅನುಷ್ಠಾನಕ್ಕಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
2021-22ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ “ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಭೌತಿಕ ಗುರಿ-30, ಚೇತನ ಯೋಜನೆ-16, ಧನಶ್ರೀ ಯೋಜನೆ-13 ಹಾಗೂ ದೇವದಾಸಿ ಪುನರ್ವಸತಿ ಯೋಜನೆ ಭೌತಿಕ ಗುರಿ-05 ನಿಗದಿಪಡಿಸಿದ್ದು, ಪ್ರಸಕ್ತ ವರ್ಷಕ್ಕೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನೇರವಾಗಿ ತಲಾ ರೂ.30,000/-ಗಳ ಪ್ರೋತ್ಸಾಹಧನ ನೀಡಲಾಗುವುದು. ಜಿಲ್ಲೆಗೆ ನಿಗದಿ ಪಡಿಸಿರುವ ಗುರಿ ಅನ್ವಯ ಯೋಜನೆಗಳಡಿ ಸೌಲಭ್ಯ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನಿಬಂಧನೆಗಳು: ಅರ್ಜಿದಾರರು ಸಾಲ ಸೌಲಭ್ಯ ಪಡೆಯಲು ಜಿಲ್ಲೆಯಲ್ಲಿರುವ ಸಮುದಾಯ ಆಧಾರಿತ ಸಂಸ್ಥೆಯಿಂದ ನೊಂದಯಿತ ಸದಸ್ಯತ್ವವನ್ನು ಅಫಿಡೆವಿಟ್ ಮೂಲಕ ಪಡೆದ ಬಗ್ಗೆ ದೃಢೀಕರಣ ಸಲ್ಲಿಸುವುದು. ಅರ್ಜಿದಾರರು ಅಧೀಕೃತ ನಿವಾಸದ ವಿಳಾಸ, ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್, ಪಡಿತರ ಚೀಟಿ ದಾಖಲಾತಿಯ ಪ್ರತಿಯನ್ನು ಸಲ್ಲಿಸುವುದು. ರಾಷ್ಟ್ರ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಲಿಂಕೇಜ್ ಆಗಿರುವ ಬ್ಯಾಂಕ್ ಖಾತೆ ಪುಸ್ತಕವನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಆದಾಯೋತ್ಪನ್ನ ಚಟುವಟಿಕೆಯನ್ನು ಆಯ್ಕೆ ಮಾಡಿಕೊಂಡು ಯೋಜನಾ ವರದಿ ಸಲ್ಲಿಸುವುದು. ರೂ.20/-ಗಳ ಛಾಪ ಕಾಗದದಲ್ಲಿ ನಿಗದಿತ ಅವಧಿಯಲ್ಲಿ ಮರುಪಾವತಿಸುವ ಕುರಿತು ಹಾಗೂ ಮರುಪಾವತಿ ಮಾಡದಿದ್ದಲ್ಲಿ ಕಾನೂನು ಕ್ರಮಕ್ಕೆ ಬದ್ದರಾಗುವ ಬಗ್ಗೆ ಮಾಡಿಕೊಳ್ಳುವ ಒಪ್ಪಂದ ಕರಾರು ಪತ್ರ ಸಲ್ಲಿಸುವುದು. ಅರ್ಜಿದಾರರು  ಖಾತೆ ಹೊಂದಿರುವ ಬ್ಯಾಂಕಿನಿಂದ ಸಾಲ ಪಡೆದಿಲ್ಲ ಎನ್ನುವುದರ ಬಗ್ಗೆ ಬೇಬಾಕಿ ಸರ್ಟಿಫಿಕೇಟ್ ಸಲ್ಲಿಸುವುದು. ಯೋಜನೆಗಳನ್ನು ಈ ಹಿಂದೆ ಸೌಲಭ್ಯ ಪಡೆದ ಫಲಾನುಭವಿಗಳು ಅರ್ಜಿ ಸಲ್ಲಿಸುವಂತಿಲ್ಲ.
ನಿಬಂಧನೆಗಳಿಗೆ ಒಳಪಟ್ಟು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅರ್ಹ ದಾಖಲೆಗಳೊಂದಿಗೆ ಸೆಪ್ಟೆಂಬರ್ 13 ರಂದು ಸಂಜೆ 5.30 ರೊಳಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಅಭ್ಯರ್ಥಿಗಳು ಕಚೇರಿಯ ಅವಧಿಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಚಿತ್ರದುರ್ಗ 08194-235958, ಚಳ್ಳಕೆರೆ 08195-250291, ಹೊಳಲ್ಕೆರೆ 08191-275250, ಹೊಸದುರ್ಗ 08199-230212, ಹಿರಿಯೂರು 08193-263513, ಮೊಳಕಾಲ್ಮೂರು 08198-229565ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours