ಬಿಜೆಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಗೊಳಿಸಲು ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಅವರು ಹೇಳಿದರು.
ಬಿಜೆಪಿ ಪಕ್ಷಕ್ಕೆ ಹಲವರು ಸೇರ್ಪಡೆಯಾಗುತ್ತಿದ್ದಾರೆ. ಪಕ್ಷ ಮತ್ತಷ್ಟು ಬಲಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ೧೫೦ ಸ್ಥಾನ ಗೆಲ್ಲುವುದು ನಮ್ಮ ಗುರಿ. ಪ್ರಧಾನಿ ಮೋದಿ ಅವರ ಆಶಯದಂತೆ ೧೫೦ ಸ್ಥಾನ ಗೆಲ್ಲಲು ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದರು.
ಪ್ರತಿ ಜಿಲ್ಲೆಯಲ್ಲೂ ಬೇರೆ ಪಕ್ಷಗಳಿಂದ ಬಿಜೆಪಿ ಸೇರಲು ಹಲವು ನಾಯಕರು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಅನ್ಯ ಪಕ್ಷಗಳ ನಾಯಕರ ಬಿಜೆಪಿ ಸೇರ್ಪಡೆ ಆಗಲಿದೆ ಎಂದರು.
+ There are no comments
Add yours